logo
WhatsApp Image 2026-04-02 at 14.46.04.jpeg
hindalco everlast.jpeg

ಕಾಸರಗೋಡು: ವಿದ್ಯಾರ್ಥಿಗೆ ಕಾರು ಡಿಕ್ಕಿಯಾಗಿ ಸಾವು: ಮೃತದೇಹವಿಟ್ಟು ಪ್ರತಿಭಟನೆ

ಟ್ರೆಂಡಿಂಗ್
share whatsappshare facebookshare telegram
9 Oct 2023
post image

ಕಾಸರಗೋಡು: ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿಯೋರ್ವ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ರವಿವಾರ ನಡೆದಿದೆ ಎಂದು ವರದಿಯಾಗಿದೆ.

ಮಂಜೇಶ್ವರ ಉದ್ಯಾವರ ಕೊಳಕೆಗುತ್ತು ನಿವಾಸಿ ರಘುನಾಥ ಆಳ್ವ ಎಂಬವರ ಪುತ್ರ ಸುಮಂತ್ (17) ಎಂಬುವವನು ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಈತ ನಿಟ್ಟೆ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಶನಿವಾರ ಸಂಜೆ ಉದ್ಯಾವರ ಮಾಡ ಸಮೀಪ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅತೀ ವೇಗದಿಂದ ಬಂದ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ರವಿವಾರ ಬೆಳಗ್ಗೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯನ್ನು ಖಂಡಿಸಿ ನಾಗರಿಕರು ರಾಷ್ಟ್ರೀಯ ಹೆದ್ದಾರಿಯ ಉದ್ಯಾವರ ಮಾಡದಲ್ಲಿ ರಸ್ತೆ ತಡೆ ನಡೆಸಿ, ವಿದ್ಯಾರ್ಥಿ ಸುಮಂತ್‌ನ ಮೃತದೇಹವಿಟ್ಟು ಪ್ರತಿಭಟನೆಯನ್ನು ನಡೆಸಿದರು.

ಈ ಸಂದರ್ಭ ಅಶ್ರಫ್ ಬಡಾಜೆ, ಜಬ್ಬಾರ್ ಪದವು, ಸಂಜೀವ ಶೆಟ್ಟಿ, ಹರೀಶ್ ಮಾಡ, ಅಶ್ರಫ್ ಕುಂಜತ್ತೂರು, ಮುಸ್ತಫ ಉದ್ಯಾವರ, ಎಸ್ ಎಂ ಬಶೀರ್ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.