



ಕಾಸರಗೋಡು: ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ.
ಮೃತ ಪಟ್ಟ ಬಾಲಕ ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ - ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್. ಮಾಂಗಾಡ್‌ನ ಕುಲಿಕುನ್ನಂನ ಸಂಬಂಧಿಯೊಬ್ಬರ ಮನೆಯಲ್ಲಿ ಈ ಘಟನೆ ನಡೆದದ್ದು, ಆಟವಾಡುತ್ತಿದ್ದ ಬಾಲಕನ ಮೇಲೆ ಕಬ್ಬಿಣದ ಗೇಟ್ ಬಿದ್ದಿದೆ. ಅದರಡಿ ಸಿಲುಕಿದ ಬಾಲಕನನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದುಬಂದಿದು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.