logo
WhatsApp Image 2026-04-02 at 14.46.04.jpeg
hindalco everlast.jpeg

ಕಾಶ್ಮೀರಿ ಪ್ರತ್ಯೇಕತಾವಾದಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಮುಜಾಹಿದ್ದೀನ್‌ ಉಗ್ರರು 33 ವರ್ಷಗಳ ಬಳಿಕ ಅರೆಸ್ಟ್‌

ಟ್ರೆಂಡಿಂಗ್
share whatsappshare facebookshare telegram
17 May 2023
post image

ಶ್ರೀನಗರ: ಕಾಶ್ಮೀರಿ ಪ್ರತ್ಯೇಕತಾವಾದಿ ಮಿರ್ವೈಜ್‌ ಮೌಲ್ವಿ ಮೊಹಮ್ಮದ್‌ ಫಾರೂಕ್‌ ಹತ್ಯೆಯಾಗಿ 33 ವರ್ಷಗಳ ನಂತರ ಇಬ್ಬರು ಹಿಜ್ಬುಲ್‌ ಮುಜಾಹಿದ್ದೀನ್‌ ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದಾರೆ.

ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರಾದ ಜಾವೈದ್ ಅಹ್ಮದ್ ಭಟ್ ಮತ್ತು ಜಹೂರ್ ಅಹ್ಮದ್ ಭಟ್ ಬಂಧಿತರು. ತಲೆಮರೆಸಿಕೊಂಡಿದ್ದ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಗುಪ್ತಚರ ಸಂಸ್ಥೆ ಬಂಧಿಸಿ, ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

1990ರ ಮೇ 21 ರಂದು ಮಿರ್ವೈಜ್‌ನನ್ನು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರು ಹತ್ಯೆ ಮಾಡಿದ್ದರು. ಹಿಜ್ಬುಲ್ ಮುಜಾಹಿದ್ದೀನ್‌ನ ಐವರು ಕಾರ್ಯಕರ್ತರು ಮಿರ್ವೈಜ್ ಹತ್ಯೆಯಲ್ಲಿ ಆರೋಪಿಗಳಾಗಿದ್ದು, ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಡೌನ್‌ಟೌನ್ ಶ್ರೀನಗರದ ಹವಾಲ್‌ನಲ್ಲಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದಾಗ ಹತ್ತಾರು ಪ್ರತಿಭಟನಾಕಾರರು ಸಾವನ್ನಪ್ಪಿದ್ದರು. 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.