logo
WhatsApp Image 2026-04-02 at 14.46.04.jpeg
hindalco everlast.jpeg

ಕಟಪಾಡಿ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
11 Dec 2022
post image

ಉಡುಪಿ:

ಬೈಕ್ ಒಂದು ಢಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಎಂದು ಗುರುತಿಸಲಾಗಿದೆ. ಸತೀಶ್ ಅವರು ಕಟಪಾಡಿಯಲ್ಲಿ ರಸ್ತೆ ದಾಟುತ್ತಿದ್ದರು. ಈ ವೇಳೆ ರಭಸವಾಗಿ ಬಂದ ಬೈಕ್‌ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರ ಪರಿಣಾಮ ಸತೀಶ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.