logo
WhatsApp Image 2026-04-02 at 14.46.04.jpeg
hindalco everlast.jpeg

ಕಟಪಾಡಿ :ಬಾವಿಗೆ ಬಿದ್ದ ನವಿಲಿನ ರಕ್ಷಣೆ

ಟ್ರೆಂಡಿಂಗ್
share whatsappshare facebookshare telegram
15 Sept 2026
post image

ಉಡುಪಿ: ಬಾವಿಗೆ ಬಿದ್ದಿದ್ದ ನವಿಲೊಂದನ್ನು ಉಡುಪಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಸೋಮವಾರ ಸಂಜೆ ಕಟಪಾಡಿ ಕೋಟೆ ಪ್ರದೇಶದಲ್ಲಿ ನಡೆದಿದೆ.

ಕಟಪಾಡಿ ಕೋಟೆ ಸಮೀಪದ ಬಾವಿಗೆ ನವಿಲು ಬಿದ್ದಿರುವ ಮಾಹಿತಿ ಲಭಿಸಿದ ಕೂಡಲೇ ಉಡುಪಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಈ ವೇಳೆ ಅಗ್ನಿಶಾಮಕ ಸಿಬ್ಬಂದಿ ಮಹಾಬಲೇಶ್ವರ ಅವರು ಬಾವಿಗೆ ಇಳಿದು ನವಿಲನ್ನು ಸುರಕ್ಷಿತವಾಗಿ ಹಿಡಿದು ಮೇಲಕ್ಕೆ ತಂದರು.

ಅಶ್ವಿನ್ ಸುನಿಲ್, ಮಹಾಬಲೇಶ್ವರ, ನಾಗೇಶ್ ಪೂಜಾರಿ, ಸುಧೀರ್, ಅಮರ್ ಹಾಗೂ ಗಣೇಶ್ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಸಿಬ್ಬಂದಿಯ ಸಮಯೋಚಿತ ಸ್ಪಂದನೆ ಹಾಗೂ ಧೈರ್ಯಶಾಲಿ ಕಾರ್ಯಾಚರಣೆಯಿಂದ ನವಿಲಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸಲಾಯಿತು. ಪ್ರಾಣಿ-ಪಕ್ಷಿಗಳ ಜೀವ ರಕ್ಷಣೆಯಲ್ಲೂ ಅಗ್ನಿಶಾಮಕ ಸಿಬ್ಬಂದಿ ತೋರಿದ ಕಾಳಜಿಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.