



ನವದೆಹಲಿ: ದೆಹಲಿ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಮದ್ಯ ನೀತಿ ಹಗರಣ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಇದೇ ವೇಳೆ ಕವಿತಾ ಅವರ ವಿಚಾರಣೆ ವಿರೋಧಿಸಿ ಬಿ ಆರ್ ಎಸ್ ಪಕ್ಷದ ಕಾರ್ಯಕರ್ತರು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಈಗಾಗಲೇ ಜಾರಿ ನಿರ್ದೇಶನಾಲಯ ಬಂಧಿಸಿದೆ.
ಕವಿತಾ ಕೂಡ ಈ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದು ರಾಜಕೀಯ ದ್ವೇಷದ ಕ್ರಮ ಎಂದು ತೆಲಂಗಾಣ ಸಿಎಂ ಚಂದ್ರ ಶೇಖರ್ ರಾವ್ ಆರೋಪಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.