



ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ‍್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 21ನೇ ರ‍್ಯಾಂಕ್, ಬಿ.ಎನ್.ವೈ.ಎಸ್. ವಿಭಾಗದಲ್ಲಿ 24ನೇ ರ‍್ಯಾಂಕ್, ಬಿ.ಎಸ್.ಸಿ. ನರ್ಸಿಂಗ್ ವಿಭಾಗದಲ್ಲಿ 33 ನೇ ರ‍್ಯಾಂಕ್, ಪಶು ವೈದ್ಯಕೀಯ ವಿಭಾಗದಲ್ಲಿ 33ನೇ ರ‍್ಯಾಂಕ್, B-ಫಾರ್ಮ್ ಮತ್ತು D-ಫಾರ್ಮ್ ವಿಭಾಗಗಳಲ್ಲಿ 49 ನೇ ರ‍್ಯಾಂಕ್ ಗಳಿಸಿದ್ದಾರೆ.
ವಿದ್ಯಾರ್ಥಿ ಶರತ್ ಹೆಚ್. ಪಿ. ಪಶು ವೈದ್ಯಕೀಯ ವಿಭಾಗದಲ್ಲಿ 26 ನೇ ರ‍್ಯಾಂಕ್, ಕೃಷಿ ವಿಜ್ಞಾನ ವಿಭಾಗದಲ್ಲಿ 37 ನೇ ರ‍್ಯಾಂಕ್ ಪಡೆದು ಶ್ಲಾಘನೀಯ ಸಾಧನೆ ಮಾಡಿದ್ದಾರೆ. ಕಾರ್ತಿಕ್ ಎ. ಎಸ್. ಕೃಷಿ ವಿಜ್ಞಾನ ವಿಭಾಗದಲ್ಲಿ 62ನೇ ರ‍್ಯಾಂಕ್, ಅಭಿನವ್ ಹೆಚ್. ಬಿ. ಪಶು ವೈದ್ಯಕೀಯ ವಿಭಾಗದಲ್ಲಿ 74 ನೇ ರ‍್ಯಾಂಕ್ ಪಡೆದಿದ್ದಾರೆ.
ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ122 ವಿದ್ಯಾರ್ಥಿಗಳು 1000 ರ‍್ಯಾಂಕ್‌ನೊಳಗೆ 122 ಮತ್ತು 210 ವಿದ್ಯಾರ್ಥಿಗಳು 2000 ರೊಳಗೆ ರ‍್ಯಾಂಕ್‌ಗಳನ್ನು ಗಳಿಸಿದ್ದಾರೆ. ಕಾಲೇಜು ಪ್ರಾರಂಭದಿಂದಲೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100 ಶೇಕಡಾ ಫಲಿತಾಂಶ ದಾಖಲಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.