



ಮಂಗಳೂರು: ಕೇರಳದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಗಡಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ಗಡಿಭಾಗದಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದು ಚೆಕ್‌ಪೋಸ್ಟ್ ಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಬಂದೋಬಸ್ತ್ ನಿಗಾ ವಹಿಸಿದ್ದಾರೆ.
ಮಂಗಳೂರು ನಗರ ಕೇಂದ್ರ ಭಾಗ ಸೇರಿದಂತೆ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿಯ ಆಯಕಟ್ಟಿನ ಸ್ಥಳಗಳಲ್ಲಿ, ವಿಮಾನ ನಿಲ್ದಾಣ, ಬಂದರು, ಧಾರ್ಮಿಕ ಕ್ಷೇತ್ರಗಳು, ಕಡಲ ತೀರ ಪ್ರದೇಶಗಳು, ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ.
ಕೇರಳ ಗಡಿಭಾಗದಿಂದ ಮಂಗಳೂರು ಪ್ರವೇಶಿಸುವ ಸ್ಥಳಗಳು ಸೇರಿದಂತೆ ವಿವಿಧೆಡೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.