



ತಿರುವನಂತಪುರಂ : ಕೇರಳದಲ್ಲಿ ಕಳೆದ ಎರಡು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಇದರ ಪರಿಣಾಮ 30 ಜನರುಅಸುನೀಗಿದ್ದು, ಅನೇಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಎನ್‌ಡಿಆರ್‌ಎಫ್ ಮಾತ್ರವಲ್ಲದೇ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳವು ಕೂಡಾ ಸ್ಥಳೀಯರ ಸಹಕಾರದೊಂದಿಗೆ ರಕ್ಷಣೆ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಕೊಟ್ಟಯಂ ಜಿಲ್ಲೆಯ ಕೂಟ್ಟಿಕಲ್ ಹಾಗೂ ಇಡ್ಡುಕ್ಕಿ ಜಿಲ್ಲೆಯ ಕೊಕ್ಕಯಾರ್‌ನಲ್ಲಿ ಐವತ್ತಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲು ಮೇಘಸ್ಫೋಟವು ಒಂದು ಕಾರಣ ಎಂದು ಹವಾಮಾನ ತಜ್ಞರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದ್ದು, ಮಳೆ ಮತ್ತು ಭೂಕುಸಿತ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.