logo
WhatsApp Image 2026-04-02 at 14.46.04.jpeg
hindalco everlast.jpeg

ಕೆರ್ವಾಶೆ :: ತೋಟದ ಕೆಲಸಕ್ಕೆಂದು ಬಂದಿದ್ದ ವ್ಯಕ್ತಿ‌ ನಿಗೂಢವಾಗಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
19 Nov 2022
post image

ಕಾರ್ಕಳ: ತೋಟದ ಕೆಲಸಕ್ಕೆಂದು ಒಡಿಶಾದಿಂದ ಬಂದಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದಲ್ಲಿ ನಡೆದಿದೆ. ಒಡಿಶಾ ಮೂಲದ 27ವರ್ಷದ ಡೇಬಿಡ್ ಮಾಜ್ಹಿ ನಾಪತ್ತೆಯಾದ ವ್ಯಕ್ತಿ. ಇವರು, ಕೆರ್ವಾಶೆ ಗ್ರಾಮದ ಸತೀಶ ಪ್ರಭು ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲೆ ಬಿಡಾರದಲ್ಲಿ ವಾಸವಾಗಿದ್ದರು. ಆದರೆ, ನ. 17ರ ಬೆಳಿಗ್ಗೆ 9:30ಕ್ಕೆ ಸೊತ್ತುಗಳನ್ನೆಲ್ಲ ಬಿಡಾರದಲ್ಲಿ ಬಿಟ್ಟು ನಿಗೂಢವಾಗಿ ಕಾಣೆಯಾಗಿದ್ದಾರೆ. ಈ ಬಗ್ಗೆ ತೋಟದ ಮಾಲೀಕ ಸತೀಶ್ ಪ್ರಭು ನೀಡಿದ ದೂರಿನಂತೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.