



ನವದೆಹಲಿ: ಮಾರ್ಚ್ 18ರಿಂದ ಕಣ್ಮರೆಯಾಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನ್ ಪ್ರತ್ಯೇಕತಾವಾದಿ, ವಾರಿಸ್ ಪಂಜಾಬ್ ದಿ ಮುಖ್ಯಸ್ಥ ಅಮೃತ್ಪಾಲ್ ಸಿಂಗ್ನನ್ನು ಭಾನುವಾರ ಬೆಳಗ್ಗೆ ಪಂಜಾಬ್‌ನ ಮೋಗಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್ ಪೊಲೀಸ್ ಮೂಲಗಳ ಪ್ರಕಾರ ಅಮೃತಪಾಲ್ ಸಿಂಗ್‌ನನ್ನು ಅಸ್ಸಾಂನ ದಿಬ್ರುಗಢಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಮಾರ್ಚ್ 18ರಿಂದ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಭಾರೀ ಕಾರ್ಯಾಚರಣೆ ನಡೆಸುತ್ತಿದ್ದರು. ಅಮೃತಪಾಲ್ ಸಿಂಗ್‌ನ ನೂರಾರು ಬೆಂಬಲಿಗರನ್ನು ಬಂಧಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರೈಫಲ್, ರಿವಾಲ್ವರ್, ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ.
ಇತ್ತೀಚೆಗೆ ಲಂಡನ್‌ಗೆ ತೆರಳಲು ಮುಂದಾಗಿದ್ದ ಅಮೃತಪಾಲ್ ಸಿಂಗ್ ಪತ್ನಿ ಕಿರಣ್‌ದೀಪ್ ಕೌರ್ ಅವರನ್ನು ಅಮೃತಸರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು.
ಅಸ್ಸಾಂನ ದಿಬ್ರುಗಢದಲ್ಲಿ ಅವನ ಎಂಟು ಸಹಾಯಕರನ್ನು ಈಗಾಗಲೇ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ,
ಖಲಿಸ್ತಾನಿ-ಪಾಕಿಸ್ತಾನದ ಏಜೆಂಟ್ ಅಮೃತಪಾಲ್ ಸಿಂಗ್, ಕಳೆದ ಕೆಲವು ವರ್ಷಗಳಿಂದ ಪಂಜಾಬ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾನೆ. ಖಲಿಸ್ತಾನಿ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರ ಅನುಯಾಯಿ ಎಂದು ಅಮೃತ್ ಪಾಲ್ ಹೇಳಿಕೊಂಡಿದ್ದು, ‘ಭಿಂದ್ರನ್‌ವಾಲೆ 2.0’ ಎಂದೂ ಕರೆಸಿಕೊಳ್ಳುತ್ತಾನೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.