



ಇಸ್ಲಾಮಾಬಾದ್: ಕುಖ್ಯಾತ ಉಗ್ರ ಹಾಗೂ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಕಮಾಂಡರ್ ಅಬ್ದುಲ್ ಜಬರ್ ಷಾನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಈ ವೇಳೆ, ಇನ್ನೂ ಇಬ್ಬರು ಭಯೋತ್ಪಾದಕರು ಗಾಯಗೊಂಡಿದ್ದಾರೆ.
ಪೋಲಿಯೊ ಲಸಿಕೆ ನೀಡುವ ತಂಡಗಳ ಮೇಲಿನ ದಾಳಿ ಸೇರಿದಂತೆ ಅನೇಕ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಬ್ದುಲ್ ಜಬರ್ ಷಾನನ್ನು ಖೈಬರ್ ಪ್ರಾಂತ್ಯದ ದಕ್ಷಿಣ ವಜಿರಿಸ್ತಾನ ಬುಡಕಟ್ಟು ಜಿಲ್ಲೆಯ ಗಡಿಯಲ್ಲಿರುವ ಗ್ರಾಮವೊಂದರಲ್ಲಿ ಹತ್ಯೆಗೈದಿವೆ.
ಸೋಮವಾರ ಪಾಕಿಸ್ತಾನದ ಭದ್ರತಾ ಪಡೆಗಳು ದಾಳಿ ಮಾಡಿ ಅಬ್ದುಲ್ ಜಬರ್ ಷಾನನ್ನು ಹತ್ಯೆ ಮಾಡಿವೆ ಎಂದು ಪಾಕ್ ಸರ್ಕಾರದ ಅಧಿಕಾರಿಗಳು ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.