



ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಕಿತ್ತೂರು ರಾಣಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡ೦ತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಅರ್ಹ ಮಹಿಳೆಯರಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ಕೊಠಡಿ ಸಂಖ್ಯೆ-204, 1ನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.