


ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 13 ರಂದು ಆರಂಭವಾಗಿದ್ದು, ಫೆಬ್ರವರಿ 26 ರ ವರೆಗೆ ಅಂದ್ರೆ ಸುಮಾರು 45 ದಿನಗಳ ಕಾಲ ನಡೆಯಲಿದೆ. ಈ ಮಹಾಕುಂಭಮೇಳದಲ್ಲಿ ಚಹಾ ವಿತರಿಸಲು ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್ ʼಚಾಯ್ ಪಾಯಿಂಟ್ʼನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಒಪ್ಪಂದದ ಭಾಗವಾಗಿ ಕುಂಭಮೇಳದಲ್ಲಿ 10 ಮಳಿಗೆಗಳನ್ನು ಸ್ಥಾಪಿಸಿದೆ. ಸುಮಾರು 1 ಕೋಟಿ ಕಪ್ ಚಹಾ ವಿತರಿಸುವ ಗುರಿಯನ್ನು ಹೊಂದಿದ್ದು, ಈ ಮೂಲಕ ಒಂದೇ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಚಹಾ ಮಾರಿದ ಗಿನ್ನೆಸ್ ವಿಶ್ವ ದಾಖಲೆಯನ್ನು ಮಾಡಲಾಗುವುದು ಎಂದು ಕೆಎಮ್‌ಎಫ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಚಾಯ್ ಪಾಯಿಂಟ್ ದೇಶದ ಅತಿದೊಡ್ಡ ಟೀ ಕೆಫೆ ಸಂಸ್ಥೆಯಾಗಿದ್ದು, ಇದರ ಸಹಯೋಗದೊಂದಿಗೆ ಕರ್ನಾಟಕದ ಹೆಮ್ಮೆಯ ಕೆಎಂಎಫ್ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ 1 ಕೋಟಿ ಕಪ್ ಚಹಾ ಮಾರಾಟ ಮಾಡಲಿದೆ. ಒಪ್ಪಂದದ ಭಾಗವಾಗಿ ಈಗಾಗಲೇ ಕುಂಭಮೇಳ ನಡೆಯುವ ಸ್ಥಳದಲ್ಲಿ 10 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಈ ಸ್ಟಾಲ್‌ಗಳಲ್ಲಿ ನೀಡಲಾಗುವ ಚಹಾಕ್ಕೆ ನಂದಿನಿ ಹಾಲನ್ನು ಬಳಸಲಾಗುವುದು. ಈ ಮೂಲಕ ಒಂದೇ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಚಹಾ ಮಾರಿದ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ನಿರೀಕ್ಷೆಯಲ್ಲಿ ಕೆಎಂಎಪ್ ಇದೆ. ಅಲ್ಲದೆ ಈ ಚಾಯ್ ಪಾಯಿಂಟ್ ಮಳಿಗೆಗಳಲ್ಲಿ ನಂದಿನಿ ಬ್ರಾಂಡ್‌ನ ಸಿಹಿ ಉತ್ಪನ್ನ ಮತ್ತು ಮಿಲ್ಕ್ ಶೇಕ್ ಸೇರಿದಂತೆ ನಂದಿನಿಯ ಇತರೆ ಉತ್ಪನ್ನಗಳು ಲಭ್ಯವಿರಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.