



ಬ್ರಹ್ಮಾವರ
ಉಸಿರಾಟದ ಸಮಸ್ಯೆ ಏಕಾಏಕಿ ಉಲ್ಬಣಗೊಂಡು ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಪೆಜಮಂಗೂರು ಎಂಬಲ್ಲಿ ಜ.6ರಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಕೊಕ್ಕರ್ಣೆ ಪೆಜಮಂಗೂರಿನ ಮೊಗವೀರ ಪೇಟೆ ನಿವಾಸಿ 23ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಇವರು ಸುಮಾರು 5 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಇಂದು ಮುಂಜಾನೆ ತೀವ್ರ ಉಸಿರಾಟದ ಸಮಸ್ಯೆಯಿಂದ ಒದ್ದಾಡುತ್ತಿದ್ದರು. ತಕ್ಷಣವೇ ಮನೆಯವರು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಢು ಹೋಗಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಗಣೇಶ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.