logo
WhatsApp Image 2026-04-02 at 14.46.04.jpeg
hindalco everlast.jpeg

ಕೊಲ್ಲೂರು: ಪೋಸ್ಟ್‌ಮೆನ್ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
10 Feb 2026
post image

ಕೊಲ್ಲೂರು, ಫೆ.10: ಉತ್ತಮ ಕರ್ತವ್ಯ ನಿರ್ವಹಣೆಗೆ ಪ್ರಶಸ್ತಿ ಪಡೆದ ಪೋಸ್ಟ್‌ಮೆನೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.9ರಂದು ಬೆಳಗ್ಗೆ ಕೊಲ್ಲೂರಿನಲ್ಲಿ ನಡೆದಿದೆ. ಮೃತರನ್ನು ಕೊಲ್ಲೂರಿನ ರವೀಂದ್ರ ಎಂಬವರ ಮಗ ಮಂಜುನಾಥ ಕೆ. ಆರ್.(31) ಎಂದು ಗುರುತಿಸಲಾಗಿದೆ. ಕೊಲ್ಲೂರಿನಲ್ಲಿ ಪೋಸ್ಟ್‌ಮೆನ್ ಆಗಿ ಕೆಲಸ ಮಾಡಿಕೊಂಡಿದ್ದ ಇವರಿಗೆ ಸುಮಾರು 4 ತಿಂಗಳ ಹಿಂದೆ ಉತ್ತಮ ಅಂಚೆ ಕರ್ತವ್ಯ ಮಾಡಿದ ಕಾರಣಕ್ಕೆ ಪ್ರಶಸ್ತಿ ದೊರೆತಿತ್ತು. ಬಳಿಕ ಕೊಲ್ಲೂರಿ ನಲ್ಲಿಯೂ ಈ ಬಗ್ಗೆ ಸನ್ಮಾನ ಮಾಡಲಾಗಿತ್ತು. ಇವರು ಇದೇ ವಿಚಾರದಲ್ಲಿ ಮಾನಸಿಕ ಸಮಸ್ಯೆಗೆ ಒಳಗಾಗಿದ್ದ ಇವರು, ಜೀವನದಲ್ಲಿ ಜಿಗುಪ್ಸೆಗೊಂಡು ಕೊಲ್ಲೂರಿನ ಮಹಾಲಕ್ಷ್ಮಿ ಹೊಟೇಲ್ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.