logo
WhatsApp Image 2026-04-02 at 14.46.04.jpeg
hindalco everlast.jpeg

ಕೊಲ್ಲೂರು: ವಸತಿ ಗೃಹದಲ್ಲಿ ಉಸಿರಾಟದ ಸಮಸ್ಯೆ ಉಲ್ಬಣಗೊಂಡು ಯಾತ್ರಾರ್ಥಿ ಸಾವು

ಟ್ರೆಂಡಿಂಗ್
share whatsappshare facebookshare telegram
2 Jan 2023
post image

ಕೊಲ್ಲೂರು: ಉಸಿರಾಟದ ಸಮಸ್ಯೆ ಉಲ್ಬಣಗೊಂಡು ಯಾತ್ರಾರ್ಥಿಯೊಬ್ಬರು ಮೃತಪಟ್ಟ ಘಟನೆ ಕೊಲ್ಲೂರಿನ ವಸತಿಗೃಹವೊಂದರಲ್ಲಿ ಡಿ.31ರಂದು ನಡೆದಿದೆ. ಮೃತರನ್ನು ಕೇರಳ ಮೂಲದ 72ವರ್ಷದ ಕೆ.ಪಿ. ವಲ್ಸನ್ ಎಂದು ಗುರುತಿಸಲಾಗಿದೆ. ಇವರು ಪತ್ನಿ ಹಾಗೂ ಸ್ನೇಹಿತರೊಂದಿಗೆ ಡಿ.30 ರಂದು ರಾತ್ರಿ ಕಾರಿನಲ್ಲಿ ಕೇರಳದಿಂದ ಕೊಲ್ಲೂರಿಗೆ ಬಂದಿದ್ದು, ಕೊಲ್ಲೂರು ಶ್ರೀಮೂಕಾಂಬಿಕಾ ದೇವರ ದರ್ಶನ ಪಡೆದು ಬಳಿಕ ಡಿ.31ರಂದು ಮಹಾಲಕ್ಷ್ಮೀ ರೆಸಿಡೆನ್ಸಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು. ಜ.1ರಂದು ಬೆಳಿಗ್ಗೆ ವಲ್ಸನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಉಸಿರಾಟ ಸಮಸ್ಯೆ ಉಲ್ಬಣಗೊಂಡು ಅಸ್ವಸ್ಥಗೊಂಡಿದ್ದರು. ತಕ್ಷಣ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ವಲ್ಸನ್ ಅವರು ದಾರಿ ಮದ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.