logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟ: ಎರಡು ರಿಕ್ಷಾಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಗೂಡ್ಸ್ ವಾಹನ: ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಟ್ರೆಂಡಿಂಗ್
share whatsappshare facebookshare telegram
12 Oct 2022
post image

ಕೋಟ:

ಗೂಡ್ಸ್ ವಾಹನವೊಂದು ಎರಡು ಆಟೊ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕೋಟ ಸರ್ಕಲ್ ನಲ್ಲಿ ಇಂದು ನಡೆದಿದೆ. ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 66 ಅನ್ನು ದಾಟುತ್ತಿದ್ದ ರಿಕ್ಷಾಕ್ಕೆ ಕುಂದಾಪುರ ಕಡೆಗೆ ಸಾಗುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಆ ಬಳಿಕ ಎಡಬದಿಯ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಸಾಗುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗೂಡ್ಸ್ ವಾಹನದಲ್ಲಿದ್ದ ಬಾಕ್ಸ್ ಗಳು ರಸ್ತೆಗೆ ಬಿದ್ದು ಚೆಲ್ಲಾಪಿಲ್ಲಿಯಾಗಿವೆ. ಎರಡು ರಿಕ್ಷಾಗಳು ಜಖಂಗೊಂಡಿವೆ. ಅಪಘಾತದ ರಭಸಕ್ಕೆ ರಿಕ್ಷಾ ಚಾಲಕ ರಿಕ್ಷಾದಿಂದ ಎಸೆಯಲ್ಪಟ್ಟು ರಸ್ತೆಗೆ ಬಿದ್ದು ಗಾಯಗೊಂಡಿದ್ದಾನೆ ಎನ್ನಲಾಗಿದೆ. ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ‌.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.