logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟ :ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
10 Jan 2022
post image

ಕೋಟ: ಬ್ರಹ್ಮಾವರ ತಾಲ್ಲೂಕಿನ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. 60 ವರ್ಷ ಪ್ರಾಯದ ನರಸಿಂಹ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿರುವ ಅಳಿಯ ವಿನೋದ ಎಂಬವರ ಮನೆ ಇಂದು ಬಂದಿದ್ದರು. ವಿನೋದ ಅವರು ಮಾವ ನರಸಿಂಹ ಅವರಿಗೆ ಊಟ ಹಾಕಿದ್ದರು. ಊಟ ಮಾಡಿದ ಬಳಿಕ ಮನೆಯ ಹೊರಗೆ ಕುಳಿತಿದ್ದ ನರಸಿಂಹ ಅವರು ಬೆಳಿಗ್ಗೆ ಸುಮಾರು 10 ಗಂಟೆಗೆ ಮನೆಯ ಬಳಿ ಇದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವಿನೋದ್ ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.