logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟ: ಗ್ರಾಮದಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ಹೊಳೆಯಲ್ಲಿ ಮುಳುಗಿ ಸಾವು

ಟ್ರೆಂಡಿಂಗ್
share whatsappshare facebookshare telegram
22 Sept 2022
post image

ಕೋಟ:

ಹೊಳೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಆವರ್ಸೆ ಗ್ರಾಮದ ಕಿರಾಡಿ ಎಂಬಲ್ಲಿ ಸೆ.21ರಂದು ಬೆಳಕಿಗೆ ಬಂದಿದೆ. ಮೃತರನ್ನು ನಂಚಾರು ಗ್ರಾಮದ ಹೆಸ್ಕುಂದ ನಿವಾಸಿ 35ವರ್ಷದ ಉದಯ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಗಾರೆ  ಕೆಲಸ ಮಾಡಿಕೊಂಡಿದ್ದು, ಸೆ. 19ರಂದು ಮಧ್ಯಾಹ್ನ ಸುಮಾರು 12:30 ಗಂಟೆಯ ಸಮಯಕ್ಕೆ ಮನೆಯ ಹತ್ತಿರದ ಸೀತಾನದಿಗೆ ಮೀನು ಹಿಡಿಯಲು ಹೋಗಿದ್ದರು. ಆ ಬಳಿಕ ಮನೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದಾಗ ಆವರ್ಸೆ ಗ್ರಾಮದ ಕಿರಾಡಿ ಎಂಬಲ್ಲಿ ಸೀತಾನದಿಯಲ್ಲಿ  ಮೃತ ದೇಹ ಸಿಕ್ಕಿದೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.