logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟ: ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಗೆ ಕೊಲೆ ಬೆದರಿಕೆ

ಟ್ರೆಂಡಿಂಗ್
share whatsappshare facebookshare telegram
4 Sept 2022
post image

ಕೋಟ: ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಎಂಬವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿದ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟ ಮೂಲದ ಅಜಿತ್ ಕುಮಾರ್ ಶೆಟ್ಟಿ ಎಂಬವರು ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಅಪರಿಚಿತ ವ್ಯಕ್ತಿಯೊರ್ವ ಕರೆ ಮಾಡಿ ಭರತ್ ದಾಸ್ ಎಂಬಾತ ಕರೆ ಮಾಡಲು ಸೂಚಿಸಿದ್ದು, ಕೂಡಲೇ 10 ಲಕ್ಷ ರೂಪಾಯಿ ನೀಡಬೇಕು. ಇಲ್ಲವಾದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಜಿತ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.