



ಕುಂದಾಪುರ: ಕೋಟದಲ್ಲಿ ನಡೆದ ಮದುಮಗನ ಸಹಿತ ಅಮಾಯಕ ಕೊರಗರ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಬಲವಾಗಿ ಖಂಡಿಸಿದ್ದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸದ್ರಿ ಕುಟುಂಬಗಳು ನನಗೆ ಪರಿಚಯವಿದ್ದು, ಅಲ್ಲಿರುವ 9ಕ್ಕೂ ಹೆಚ್ಚು ಕುಟುಂಬದವರು ಅಮಾಯಕರಾಗಿದ್ದು, ಅವರ ಮೇಲೆ ವಿನಾಕಾರಣ ದೌರ್ಜನ್ಯ ಎಸಗಿರುವ ಪೊಲೀಸರ ಮೇಲೆ ತಕ್ಷಣ ಕಠಿಣ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪಶ್ಚಿಮ ವಲಯ ಐಜಿಪಿ ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು ಇಂತಹ ಚಟುವಟಿಕೆಗಳನ್ನು ಸರಕಾರ ಸಹಿಸುವುದಿಲ್ಲ. ಈಗಾಗಲೇ ಮಾನ್ಯ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಘಟನೆಗೆ ಕಾರಣರಾದ ಪೋಲಿಸರ ಮೇಲೆ ತಕ್ಷಣ ಕ್ರಮ ಕೈಗೊಳ್ಳಲು ಹೇಳಿರುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಾಳೆ ಕೊರಗರ ಕೇರಿಗೆ ಭೇಟಿ ನೀಡಲಿದ್ದು ನೊಂದ ಕುಟುಂಬದ ಜೊತೆ ಚರ್ಚಿಸಲಿದ್ದಾರೆ. ಗೃಹ ಸಚಿವ ಅರಗಜ್ಞಾನೇಂದ್ರ ಜೊತೆ ಮಾತನಾಡಿ ಪೋಲೀಸರ ಮೇಲಿನ ಕ್ರಮಕ್ಕೆ ಸೂಚಿಸಿದ್ದು ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು ಎಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.