



ಉಡುಪಿ: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರಿ (97) ಅಸೌಖ್ಯದಿಂದ ಭಾನುವಾರ ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪೂಜಾರಿಯವರು ತನ್ನ ಯಶಸ್ವಿನಲ್ಲಿ ತಾಯಿಯ ಪಾತ್ರ ಮಹತ್ವದಿದ್ದೆ ಎಂದು ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದರು.
ಅವರ ಅಗಲುವಿಕೆಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ರಾಜ್ಯ, ರಾಷ್ಟ್ರ ಮಟ್ಟದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.