



ಉಡುಪಿ: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದ ಮತ್ತು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿಯಿಂದ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ಉಡುಪಿ ಪುರಸಭಾ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ್ ಭಟ್ ಅವರ ಮನೆಗೆ ಆಗಮಿಸಿ ಆಶೀರ್ವಾದ ಪಡೆದರು ಈ ಸಂದರ್ಭದಲ್ಲಿ ಭಟ್ರರು ಅತ್ಯಂತ ಹೆಚ್ಚು ಅಂತರದಿಂದ ಗೆದ್ದು ಬಂದು ಮತ್ತಷ್ಟು ರಾಜ್ಯದ ಜನಸೇವೆ ಮಾಡಲು ಅವಕಾಶ ಸಿಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ರಾಘವೇಂದ್ರ ಕಿಣಿ, ನಗರಸಭಾ ಸದಸ್ಯರಾದ ಶ್ರೀಮತಿ ರಶ್ಮಿ ಚಿತ್ತರಂಜನ್ ಭಟ್, ಕೋಟೇಶ್ವರ ಪಂಚಾಯಿತ್ ಅಧ್ಯಕ್ಷರಾದ ಕೃಷ್ಣ ಗೊಲ್ಲ ಇನ್ನಿತರರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.