



ಕೋಟ:
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೊಳಹಳ್ಳಿ ಯಡಾಳಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಯಡಾಳಬೆಟ್ಟು ನಿವಾಸಿ 32ವರ್ಷದ ನವೀನ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ನ್ಯಾಯಾಲಯದಲ್ಲಿ ಸುಮಾರು 6-7 ವರ್ಷಗಳಿಂದ ಅಟೆಂಟರ್ ಆಗಿ ಕೆಲಸ ಮಾಡಿಕೊಂಡಿದ್ದರು. ಸುಮಾರು ಒಂದೂವರೆ ವರ್ಷಗಳಿಂದ ಅಮಾನತಿನಲ್ಲಿ ಇರಿಸಿದ್ದು, ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.