logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟ: ಯುವಕ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
29 Jul 2022
post image

ಕೋಟ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಕೋಟ ಬಳಿ ಇಂದು ಜುಲೈ29 ನಡೆದಿದೆ. ಕೋಟ ನಿವಾಸಿ 33ವರ್ಷದ ರಂಜನ್ ಜಿ. ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಸೊಸೈಟಿಗಳಿಗೆ ಸಾಪ್ಟ ವೇರ್‌ ಇನ್‌ ಸ್ಟಾಲ್‌ ಮಾಡುವ ಕೆಲಸ ಮಾಡಿಕೊಂಡಿದ್ದನು. ಯಾವುದೋ ಕಾರಣಕ್ಕೆ ಜೀವನದಲ್ಲಿ ಮನನೊಂದು ಇಂದು ಬೆಳಿಗ್ಗೆ ತಾನು ವಾಸವಿದ್ದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.