



ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ ಎಚ್ (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ. 2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ರವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.