logo
WhatsApp Image 2026-04-02 at 14.46.04.jpeg
hindalco everlast.jpeg

ಕೋಟೇಶ್ವರ: ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಟ್ರೆಂಡಿಂಗ್
share whatsappshare facebookshare telegram
19 Sept 2022
post image

ಕೋಟೇಶ್ವರ: ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಮನೆಯ ಕೋಣೆಯ ಕಪಾಟಿನ ಚಿಲಕ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಸೆ.18ರಂದು ರಾತ್ರಿ ನಡೆದಿದೆ. ಕೋಟೇಶ್ವರ ಗ್ರಾಮದ ನಾರಾಯಣ ಆಚಾರ್ಯ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಕಪಾಟಿನಲ್ಲಿದ್ದ 64 ಗ್ರಾಂ ತೂಕದ ಚಿನ್ನದ  ಲಕ್ಷ್ಮೀ ಹಾರ, 12 ಗ್ರಾಂ ತೂಕದ ಬ್ರೇಸ್ಲೇಟ್, 4 ಬೆಳ್ಳಿಯ ಲೋಟ, 4 ಬೆಳ್ಳಿಯ  ಚಮಚ ಹಾಗೂ 12 ಸಾವಿರ ನಗದು ಸೇರಿ ಒಟ್ಟು ರೂಪಾಯಿ 3.66 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.