



ಬೆಂಗಳೂರು, ಎ.25: ಕೋವಿಡ್ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮಾಸ್ಕ್ ಧಾರಣೆ ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಬಗ್ಗೆ ಇಂದೇ ಮಾರ್ಗಸೂಚಿ ಹೊರಡಿಸಲಾಗುವುದು.. ರಾಜ್ಯಾದ್ಯಂತ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವ ಬಗ್ಗೆ ಚಿಂತನೆ ನಡೆಸಿಲ್ಲ. ಈ ಸಂಬಂಧ ಮಾರ್ಗಸೂಚಿ ಹೊರಡಿಸುತ್ತೇವೆ. ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಬಗ್ಗೆ ಮನವಿ ಮಾಡಲಾಗುವುದು
ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.