


ಮಂಗಳೂರು:** ಕೆಆರ್‌ಡಿಎಲ್ ಅಧಿಕಾರಿಗಳ ವಿರುದ್ಧ ಪುತ್ತೂರು ಶಾಸಕ ಅಶೋಕ್ ರೈ ಮಾಡಿರುವ ಭ್ರಷ್ಟಾಚಾರ ಆರೋಪದ ವಿಚಾರ ದಕ್ಷಿಣ ಕನ್ನಡ ಕೆಡಿಪಿ ಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಯಿತು.
ಬಿಜೆಪಿ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಪ್ರಶ್ನಿಸಿ, ಆರೋಪದ ಕುರಿತು ಕೈಗೊಂಡಿರುವ ಕ್ರಮ ಹಾಗೂ ತನಿಖೆಯ ಸ್ಥಿತಿಯ ಬಗ್ಗೆ ಸ್ಪಷ್ಟನೆ ಕೇಳಿದರು. ಈ ವೇಳೆ ಸಚಿವರು ಮತ್ತು ಶಾಸಕ ಭರತ್ ಶೆಟ್ಟಿ ನಡುವೆ ಮಾತಿನ ಚಕಮಕಿ ನಡೆಯಿತು.
ಜಿಲ್ಲೆಯ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚಿಸೋಣ, ‘ಮಕ್ಕಳಾಟಿಕೆ ಮಾಡಬೇಡಿ’ ಎಂದು ಖಾದರ್ ಹೇಳಿದ್ದು ಬಿಜೆಪಿ ಶಾಸಕರ ಆಕ್ರೋಶಕ್ಕೆ ಕಾರಣವಾಯಿತು.
ಆರೋಪದ ಕುರಿತು ಈಗಾಗಲೇ ತನಿಖೆ ನಡೆಯುತ್ತಿದ್ದು, ವಿಚಾರಣೆ ನಡೆಸದೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಖಾದರ್ ಸ್ಪಷ್ಟಪಡಿಸಿದರು. ಶಾಸಕರ ಆರೋಪ ಸರಿ ಅಥವಾ ಅಧಿಕಾರಿಗಳ ಹೇಳಿಕೆ ಸರಿ ಎಂಬುದು ತನಿಖೆಯಿಂದ ತಿಳಿಯಲಿದೆ ಎಂದರು.
ಅಶೋಕ್ ರೈ ಅವರ ಆರೋಪದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಫಲಿತಾಂಶದ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಖಾದರ್ ಸೂಚಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.