



ಕರ್ನಾಟಕ ರಾಜ್ಯ ಪೊಲೀಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪೊಲೀಸ್ ಹುದ್ದೆಗೆ ಸೇರಲು ಬಯಸುವ, ಕನಸು ಹೊತ್ತವರಿಗೆ ಇದು ಉತ್ತಮ ಅವಕಾಶವಾಗಿದ್ದು, ಈ ಕೂಡಲೇ ಅರ್ಜಿ ಸಲ್ಲಿಸಿ. ಹುದ್ದೆಯ ಬಗೆಗಿನ ಮಾಹಿತಿ ಇಲ್ಲಿದೆ.
ಒಟ್ಟು 25 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಆಫ್ಲೈನ್ ಅಥವಾ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು. ಸರ್ಕಾರಿ ಹುದ್ದೆ ಬಯಸುವವರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ಕೂಡಲೇ ಅರ್ಜಿ ಸಲ್ಲಿಸಿ, ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ.
ಹುದ್ದೆಯ ವಿವರ : ಬೋಟ್ ಕ್ಯಾಪ್ಟನ್- 6 ಸಹಾಯಕ ಬೋಟ್ ಕ್ಯಾಪ್ಟನ್- 7 ಮೋಟಾರ್ ಲಾಂಚ್ ಮೆಕ್ಯಾನಿಕ್- 2 ಇಂಜಿನ್ ಡ್ರೈವರ್- 10
ಬೋಟ್ ಕ್ಯಾಪ್ಟನ್- ಪೊಲೀಸ್ ಉಪನಿರೀಕ್ಷಕರು ಸಹಾಯಕ ಬೋಟ್ ಕ್ಯಾಪ್ಟನ್- ಸಹಾಯಕ ಪೊಲೀಸ್ ಉಪನಿರೀಕ್ಷಕರು ಮೋಟಾರ್ ಲಾಂಚ್ ಮೆಕ್ಯಾನಿಕ್- ಸಹಾಯಕ ಪೊಲೀಸ್ ಉಪನಿರೀಕ್ಷಕರು ಇಂಜಿನ್ ಡ್ರೈವರ್- ಪೊಲೀಸ್ ಹೆಡ್ ಕಾನ್ಸ್ಟೇಬಲ್
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 20/02/2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 8/3/2023
ವಿದ್ಯಾರ್ಹತೆ: ನೇವಿ/ಕೋಸ್ಟ್ಗಾರ್ಡ್/ಬಿಎಸ್ಎಫ್ (ವಾಟರ್ ವಿಂಗ್) ನಿಂದ ನಿವೃತ್ತಗೊಂಡ ಅಧಿಕಾರಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ksp.gov.in ಗೆ ಭೇಟಿ ನೀಡಿ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.