logo
WhatsApp Image 2026-04-02 at 14.46.04.jpeg
hindalco everlast.jpeg

ಕುಕ್ಕುಂದೂರು: ಬಾವಿಗೆ ಬಿದ್ದು ವೃದ್ಧ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
7 Dec 2022
post image

ಕಾರ್ಕಳ: ನೀರು ತರಲು ಹೋದ ವೃದ್ಧರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಮೇಲ್ಜಡ್ಡು ಎಂಬಲ್ಲಿ ಡಿ.6ರಂದು ಸಂಜೆ ನಡೆದಿದೆ. ಕುಕ್ಕುಂದೂರು ಗ್ರಾಮದ ಮೇಲ್ಜಡ್ಡು ನಿವಾಸಿ 65 ವರ್ಷದ ಚುಕುಡ ಎಂದು ಗುರುತಿಸಲಾಗಿದೆ. ಇವರು ಪ್ರತಿದಿನ ಸಂಜೆ ಬಾವಿಯಿಂದ ನೀರು ತೆಗೆದು ತೋಟಕ್ಕೆ ಹಾಕುತ್ತಿದ್ದರು. ಅದರಂತೆ ನಿನ್ನೆ ಸಂಜೆ ಕೊಡಪಾನ ಹಿಡಿದುಕೊಂಡು ತೋಟದಲ್ಲಿರುವ ಬಾವಿಗೆ ಹೋಗಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.