



ಕುಮಟಾ : ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಕುಮಟಾ ತಾಲೂಕಿನ ಬಾಡದಲ್ಲಿ ಜೂ.25 ಶನಿವಾರ ನಡೆದಿದೆ.
ಘಟನೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರು ನೀರುಪಾಲಾಗಿದ್ದಾರೆ.
ಬೆಂಗಳೂರಿನಿಂದ 87 ಮಂದಿ ವಿದ್ಯಾರ್ಥಿಗಳ ತಂಡ ಕುಮಟಾ ಪ್ರವಾಸಕ್ಕೆ ಬಂದಿದ್ದರು. ಕುಮಟಾದ ಬಾಡದಲ್ಲಿರುವ ರೆಸಾರ್ಟ್ ಗೆ ಬಂದಿದ್ದ ವಿದ್ಯಾರ್ಥಿಗಳಲ್ಲಿ ಕೆಲವರು ಸಮುದ್ರಕ್ಕಿಳಿದು ಆಟವಾಡುತ್ತಿದ್ದರು. ಈ ವೇಳೆ ನಾಲ್ವರು ನೀರು ಪಾಲಾಗಿದ್ದಾರೆ.
ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ, ತೇಜಸ್ ಡಿ., ಕಿರಣ್ ಕುಮಾರ್ ನೀರುಪಾಲಾದವರು. ಇದರಲ್ಲಿ ಅರ್ಜುನ್ ಹಾಗೂ ಚೈತ್ರಶ್ರೀ ಎಂಬುವವರ ಮೃತ ದೇಹ ಪತ್ತೆಯಾಗಿದೆ. ತೇಜಸ್ ಡಿ., ಕಿರಣಕುಮಾರ್ ಸಮುದ್ರದಲ್ಲಿ ಕಣ್ಮರೆಯಾಗಿದ್ದಾರೆ.
ಸ್ಥಳಕ್ಕೆ ಕುಮಟಾ ಠಾಣೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಸ್ಥಳೀಯರೊಂದಿಗೆ ಶೋಧಕಾರ್ಯ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.