logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ತೀವ್ರ ಅನಾರೊಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಟ್ರೆಂಡಿಂಗ್
share whatsappshare facebookshare telegram
7 Aug 2024
post image

ಕುಂದಾಪುರ: ತೀವ್ರ ಅನಾರೊಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಮೂಡ್ಲಕಟ್ಟೆ ರೈಲು ನಿಲ್ದಾಣ ಬಳಿಯ ರುದ್ರುಮನೆ ಎಂಬಲ್ಲಿ ಆ.6 ರಂದು ರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಕಂದಾವರ ಗ್ರಾಮದ ಮೂಡ್ಲಕಟ್ಟೆ ನಿವಾಸಿ ಅಣ್ಣಪ್ಪ (30). ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 3 ತಿಂಗಳ ಹಿಂದೆ ಉಡುಪಿ ಜಿಲ್ಲಾಸ್ಪತ್ರೆ, ಮಣಿಪಾಲ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ, ಗುಣಮುಖರಾಗಿರಲಿಲ್ಲ. ಈ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಮೂಡ್ಲಕಟ್ಟೆ ರೈಲು ನಿಲ್ದಾಣ ಬಳಿಯ ರುದ್ರುಮನೆ ಎಂಬಲ್ಲಿನ ಹಂಚಿನ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.