logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಟ್ರೆಂಡಿಂಗ್
share whatsappshare facebookshare telegram
29 Jul 2022
post image

ಕುಂದಾಪುರ: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕು ಕೊಡ್ಲಾಡಿ ಗ್ರಾಮದಲ್ಲಿ ಜುಲೈ 28ರಂದು ರಾತ್ರಿ ನಡೆದಿದೆ. ಕೊಡ್ಲಾಡಿ ನಿವಾಸಿ 51 ವರ್ಷದ ಗುಂಡು ಪೂಜಾರಿ ಮೃತ ದುರ್ದೈವಿ‌. ಇವರು ಸುಮಾರು 18 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 25ರಂದು ತನ್ನ ಮನೆಯಲ್ಲಿ ನಿದ್ರೆ ಮಾತ್ರೆಯನ್ನು ನುಂಗಿ ಅಸ್ವಸ್ಥರಾಗಿದ್ದರು. ಮಂಗಳೂರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಜುಲೈ 28ರಂದು ಕೊನೆಯುಸಿರೆಳೆದಿದ್ಧಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.