logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ :ಅತೀಯಾದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಟ್ರೆಂಡಿಂಗ್
share whatsappshare facebookshare telegram
2 Dec 2022
post image

ಕುಂದಾಪುರ:

ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಯ ಮಾತ್ರೆಗಳನ್ನು ಅತೀಯಾಗಿ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದಲ್ಲಿ ನ.30ರಂದು ನಡೆದಿದೆ. ಮೃತರನ್ನು ವಡೇರಹೋಬಳಿ ಗ್ರಾಮದ ನಿವಾಸಿ 60 ವರ್ಷದ ಆಲ್ವಿನ್ ಥೋಮನ್ ಪಿಂಟೋ ಎಂದು ಗುರುತಿಸಲಾಗಿದೆ. ಇವರು ವಿಪರೀತ ಮಧ್ಯ ಸೇವನೆ ಮಾಡುವ ಅಭ್ಯಾಸವಿದ್ದು, ಇದೇ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ನ. 29ರಂದು ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಯ ಮಾತ್ರೆಗಳನ್ನು ಸೇವಿಸಿದ್ದರು. ಬಳಿಕ ಅವರನ್ನು ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಲ್ವಿನ್ ಅವರು ನಿನ್ನೆ ಮೃತಪಟ್ಟಿದ್ದಾರೆ‌. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.   

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.