



ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪವನ್ ನಾಯಕ್ ನವರು ರೌಂಡ್ಸ್ ಕರ್ತವ್ಯದಲ್ಲಿರುವ ಸಮಯದಲ್ಲಿ ಕಂದಾವರ ಗ್ರಾಮದ ಮೂಡ್ಲಕಟ್ಟೆ ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಗಾಂಜಾ ಸೇವಿಸುತ್ತಿರುವುದು ಕಂಡು ಬಂದಿದೆ. ಆರೋಪಿ 36ವರ್ಷದ ಮದನ್‌ಕುಮಾರ್ ಎಂಬಾತನನ್ನು ವಿಚಾರಿಸಿ ವೈದ್ಯಾಧಿಕಾರಿವರ ಮುಂದೆ ಹಾಜರುಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.