logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್ ತಗುಲಿ ಯುವಕ ಸಾವು

ಟ್ರೆಂಡಿಂಗ್
share whatsappshare facebookshare telegram
24 Nov 2022
post image

ಕುಂದಾಪುರ:

ಮರಕ್ಕೆ ಹತ್ತಿ ಕೊಂಬೆ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ನಾಯಕವಾಡಿ ಚೆಕ್‌ಪೋಸ್ಟ್‌ಬಳಿ ನ.23ರಂದು 1.40ಕ್ಕೆ ನಡೆದಿದೆ. ಮೃತರನ್ನು ಗುಜ್ಜಾಡಿ ಗ್ರಾಮದ ನಾಯಕವಾಡಿ ನಿವಾಸಿ 20ವರ್ಷದ ಸುಜಯ್ ಎಂದು ಗುರುತಿಸಲಾಗಿದೆ. ಸಂಗಮೇಶ್ವರ ದೇವಸ್ಥಾನದ ಕಾರ್ತಿಕ ದೀಪೋತ್ಸವದ ಕಟ್ಟೆಪೂಜೆಗೆ ಸಿದ್ಧತೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಜಯ್ ಅವರು ನಿನ್ನೆ ನಾಯಕವಾಡಿ ಚೆಕ್‌ಪೋಸ್ಟ್‌ಬಳಿ ಇರುವ ಕಟ್ಟೆಗೆ ಮಾವಿನ ತೋರಣ ಕಟ್ಟುವ ಸಲುವಾಗಿ ಮಾವಿನ ಮರಕ್ಕೆ ಹತ್ತಿ ಕೊಂಬೆ ಕಡಿಯುತ್ತಿದ್ದರು. ಈ ವೇಳೆ ಮರದ ಕೊಂಬೆಯು ಅಲ್ಲೆ ಹಾದು ಹೋಗಿರುವ ವಿದ್ಯುತ್‌ ತಂತಿಯ ಮೇಲೆ ಬಿದ್ದಿದೆ. ಇದರಿಂದ ಆಕಸ್ಮಿಕವಾಗಿ ವಿದ್ಯುತ್‌ ಪ್ರವಹಿಸಿ ಸುಜಯ್‌ ಅವರಿಗೆ ತಗುಲಿದ್ದು, ಅಸ್ವಸ್ಥಗೊಂಡ ಅವರನ್ನು ಸ್ಥಳೀಯರ ಸಹಾಯದಿಂದ ಮರದಿಂದ ಇಳಿಸಿ ಕುಂದಾಪುರ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು ಸುಜಯ್‌ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.