



ಕುಂದಾಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಜಾರಿಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕುಂದಾಪುರ ತಾಲೂಕು ಆಲೂರು ಗ್ರಾಮದ ಕಾಳಿಕಾಂಬ ನಗರದಲ್ಲಿ ಜುಲೈ 14ರಂದು ಸಂಜೆ ನಡೆದಿದೆ. ಮೃತರನ್ನು ಮೂಲತ ಬಾಗಲಕೋಟೆ ತಾಲೂಕಿನ ಹಂಡರಗಲ್‌ಗ್ರಾಮದ 38ವರ್ಷದ ಸಂಗಪ್ಪ ಎಂದು ಗುರುತಿಸಲಾಗಿದೆ. ಇವರು ಸುಮಾರು 1 ತಿಂಗಳಿನಿಂದ ಅಲೂರು ಗ್ರಾಮದ ಸುಭಾಸ್ ಶೆಟ್ಟಿ ಅವರ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದು, ಅಲ್ಲೆ ಶೆಡ್‌ನಲ್ಲಿ ವಾಸವಾಗಿದ್ದರು. ನಿನ್ನೆ ಕೆಲಸ ಮುಗಿಸಿಕೊಂಡು ಕೃಷಿ ನೀರಿನ ಹೊಂಡಕ್ಕೆ ಕೈ ಕಾಲು ತೊಳೆಯಲು ಹೋಗಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ . ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.