logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವೃದ್ಧ ಚಿಕಿತ್ಸೆ ಫಲಿಸದೆ ಸಾವು

ಟ್ರೆಂಡಿಂಗ್
share whatsappshare facebookshare telegram
10 Nov 2022
post image

ಕುಂದಾಪುರ:

ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವೃದ್ಧರೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಸ್ರೂರು ಗ್ರಾಮದ ಹಟ್ಟಿಕುದ್ರು ಎಂಬಲ್ಲಿ ನಡೆದಿದೆ. ಮೃತರನ್ನು ಹಟ್ಟಿಕುದ್ರು ನಿವಾಸಿ 72 ವರ್ಷದ ಪುಟ್ಟು ಪೂಜಾರಿ ಎಂದು ಗುರುತಿಸಲಾಗಿದೆ.ಇವರು ವಿಪರೀತ ಮದ್ಯಸೇವನೆ ಮಾಡುವ ಚಟ ಹೊಂದಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನ.7ರಂದು ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಕುಂದಾಪುರ ನ್ಯೂ ಮೆಡಿಕಲ್‌ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಯಲ್ಲಿದ್ದ ಪುಟ್ಟು ಪೂಜಾರಿ ಅವರು ಚಿಕಿತ್ಸೆ ಫಲಕಾರಿಯಾಗದೆ ನ. 9ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಫುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.