logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಬಾಲ್ಯ ವಿವಾಹ - ಪ್ರಕರಣ ದಾಖಲು..

ಟ್ರೆಂಡಿಂಗ್
share whatsappshare facebookshare telegram
3 Jun 2024
post image

ಕುಂದಾಪುರ: ಹಾಲಾಡಿ ಗ್ರಾಮದ ಅಪ್ತಾಪ್ತ ವಯಸ್ಸಿನ ಯುವತಿಗೆ ತೊಂಬಟ್ಟು ಗ್ರಾಮದ ಯುವಕನೊಂದಿಗೆ ಹಾಲಾಡಿ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಮೇ 21ರಂದು ನಡೆದ ಬಾಲ್ಯ ವಿವಾಹದ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲ್ಯ ವಿವಾಹ ಪ್ರಕರಣದಲ್ಲಿ ತೊಂಬಟ್ಟು ನಿವಾಸಿ ಭರತ್‌ ಶೆಟ್ಟಿ, ಯುವತಿಯ ತಂದೆ ಸಂತೋಷ್‌ ಶೆಟ್ಟಿ ಹಾಗೂ ಆಕೆಯ ಬಾವ ರಾಜೇಶ್‌ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಅಪ್ರಾಪ್ತ ವಯಸ್ಸಿನ ಯುವತಿ ಹಾಗೂ ಭರತ್‌ ಶೆಟ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ಭರತ್‌ ಶೆಟ್ಟಿ ಮದುವೆಯಾಗುವಂತೆ ಬಾಲಕಿಯನ್ನು ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಬಾಲಕಿ ಕೂಡ ಮದುವೆ ಮಾಡಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದ್ದಾಗಿ ತಂದೆಯಲ್ಲಿ ಹೇಳಿಕೊಂಡಿದ್ದಳು. ಕೂಲಿ ಕೆಲಸ ಮಾಡಿಕೊಂಡಿದ್ದ ಬಾಲಕಿಯ ತಂದೆಯು ಮಗಳ ಮಾತಿಗೆ ಹೆದರಿ ಮದುವೆ ಮಾಡಿಸಿಕೊಟ್ಟಿದ್ದರು. ಮದುವೆ ಬಗ್ಗೆ ತಂದೆ ದೊಡ್ಡ ಮಗಳ ಗಂಡ ರಾಜೇಶ್‌ ಶೆಟ್ಟಿ ಅವರೊಂದಿಗೆ ಪ್ರಸ್ತಾವಿಸಿ ಹಾಲಾಡಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಮೇ 21ರಂದು ಮದುವೆ ಮಾಡಿಸಿದ್ದರು. ಆದರೆ ಈ ಮದುವೆಗೆ ಬಾಲಕಿಯ ತಾಯಿಯ ಒಪ್ಪಿಗೆ ಇರಲಿಲ್ಲ ಎನ್ನಲಾಗಿದೆ. ಕುಂದಾಪುರ ಸಹಾಯಕ ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ರೂಪಾ ಬಂಗೇರ ಅವರಿಗೆ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿ, ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.