



ಉಡುಪಿ: ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್ ಆಚಾರ್ಯ ಎಂಬವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕುಂದಾಪುರ ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ಕಟ್ಟಡದಲ್ಲಿ ಶವ ಪತ್ತೆಯಾಗಿದೆ. ಸಂತೋಷ ಆಚಾರ್ಯ ಕಳೆದ 25 ವರ್ಷಗಳಿಂದ ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ವಾರಕ್ಕೊಮ್ಮೆ ಬ್ರಹ್ಮಾವರ ಬಳಿಯ ಉಳ್ಳೂರಿನಲ್ಲಿರುವ ತನ್ನ ಮನಗೆ ಹೋಗಿ ಬರುತ್ತಿದ್ದರು. ನಾಗರ ಪಂಚಮಿಯ ಪ್ರಯುಕ್ತ ಅಣ್ಣ ಮನೆಗೆ ಬರಲಿಲ್ಲವೆಂದು ಸಹೋದರ ಸುರೇಶ್ ಆಚಾರ್ಯ ಅವರು ಫೋನ್ ಮಾಡಿದ್ದರು. ಆಗ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಅವರು ಅಣ್ಣನ ಮನೆಗೆ ಸ್ನೇಹಿತರೊಬ್ಬರನ್ನು ಕಳುಹಿಸಿ ವಿಚಾರಿಸಿದಾಗ ಸಂತೋಷ್ ಆಚಾರ್ಯ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಸಂತೋಷ್ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿಯೇ ಮೃತಪಟ್ಟಿದ್ದರು.
ಶವವನ್ನು ಸರಕಾರಿ ಆಸ್ಪತ್ರೆಯ ಶವಾಗರಕ್ಕೆ ಸಾಗಿಸಲಾಗಿದ್ದು, ಬಳಿಕ ಮರಣೋತ್ತರ ಶವ ಪರೀಕ್ಷೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.