



ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸೆ.23 ರಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ವಿಭಾಗದಲ್ಲಿ ಕ್ರಮವಾಗಿ-ವಿಘ್ನೇಶ್, ರತನ್, ರಿತೇಶ್, ನವಾಜ್, ಜಿತೇಂದ್ರ, ಚರಣ್ ಹಾಗೂ ಬಾಲಕಿಯರ ವಿಭಾಗದಲ್ಲಿ ಕುಮಾರಿ ಅನುಷಾ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.