



ಕುಂದಾಪುರ:
ಆಸ್ಪತ್ರೆಯಲ್ಲೆ ವ್ಯಕ್ತಿಯೋರ್ವರು ಕುಸಿದುಬಿದ್ದು ಮೃತಪಟ್ಟ ಘಟನೆ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ 39ವರ್ಷದ ಕೃಷ್ಣರಾಜ್ ಎಂದು ಗುರುತಿಸಲಾಗಿದೆ. ಇವರು ಹೊಂಬಾಡಿ-ಮಂಡಾಡಿ ಗ್ರಾಮದ ಕ್ಯಾಸನಮಕ್ಕಿ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.