logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಕೆರೆಗೆ ಬಿದ್ದು ವೈದ್ಯಕೀಯ ವಿದ್ಯಾರ್ಥಿ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
19 Sept 2024
post image

ಕುಂದಾಪುರ: ವೈದ್ಯಕೀಯ ವಿದ್ಯಾರ್ಥಿಯೊಬ್ಬ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.

ಹಂಗಳೂರಿನ ಗೌರೀಶ್‌ ಬಿ.ಆರ್‌ (25) ಮೃತಪಟ್ಟವರು ಎಂದು ತಿಳಿದುಬಂದಿದೆ.

ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಬುಧವಾರ ತಡರಾತ್ರಿ ಬ್ಯಾಗ್‌, ಮೊಬೈಲ್‌ ಫೋನ್‌, ಚಪ್ಪಲಿ ಕಂಡುಬಂದಿತ್ತು. ಅಂದು ಸಂಜೆ 5.30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲುಜಾರಿ ಬಿದ್ದಿರಬಹುದು ಎಂದು ಕುಟುಂಬಿಕರು ಶಂಕಿಸಿದ್ದಾರೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ಯುವಕ ಆತ್ಮಹತ್ಯೆಯೆ ಅಥವಾ ಕಾಲು ಜಾರಿ ಬಿದ್ದನೋ.. ಈ ಕುರಿತು ಮಾಹಿತಿ ತಿಳಿದು ಬರಬೇಕಾಗಿದೆ.

ಈ ಬಗ್ಗೆ ಮೃತ ಯುವಕನ ಸಹೋದರ ವಿಘ್ನೇಶ್‌ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.