



ಕುಂದಾಪುರ: ನಗರದ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವೈದ್ಯಕೀಯ ಆಮ್ಲಜನಕ ಸ್ಥಾವರದ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು.
ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ನೂತನ ಸ್ಥಾವರದ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕುಂದಾಪುರ ಉಪ ವಿಭಾಗಧಿಕಾರಿ ಕೆ.ರಾಜು ಕರೋನಾದಿಂದ ಆಮ್ಲಜನಕದ ಕೊರತೆ ಎಲ್ಲಾ ಆಸ್ಪತ್ರೆಯಲ್ಲೂ ಸಮಸ್ಯೆಯನ್ನು ಸೃಷ್ಟಿಸಿತ್ತು. ಎರಡನೇ ಅಲೆಯ ವೇಳೆಗೆ ಕುಂದಾಪುರದಲ್ಲಿ ಆಮ್ಲಜನಕ ಸ್ಥಾವರ ನಿರ್ಮಾಣ ಮಾಡಲು ಸರಕಾರ ಚಿಂತನೆ ನಡೆಸಿತ್ತು. ಆರಂಭದಲ್ಲಿ ಸಾಕಷ್ಟು ಗೊಂದಲಗಳ ನಡುವೆ ಪ್ರಾರಂಭಗೊಂಡ ಆಮ್ಲಜನಕ ಸ್ಥಾವರ ಇಂದು ಉದ್ಘಾಟನೆ ಗೊಂಡಿರುವುದು ಬಹಳ ಸಂತೋಷವಾಗಿದೆ. ಕರೋನಾ ನಿಯಂತ್ರಣಕ್ಕೆ ರಾಜ್ಯ ಪ್ರಥಮ ಸ್ಥಾನ ಪಡೆದಿದೆ, ಅದೇ ರೀತಿ ಕುಂದಾಪುರ ತಾಲೂಕು ಆಸ್ಪತ್ರೆ ಕರೋನಾ ನಿಯಂತ್ರಣ ಮಾಡುವುದರಲ್ಲಿ ಮಾದರಿಯಾಗಿದೆ ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ನುಡಿದರು.
ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಸಂದೀಪ್ ಖಾರ್ವಿ, ವೈದ್ಯಾಧಿಕಾರಿ ಡಾ| ರಾಬರ್ಟ್, ಲಯನ್ಸ್ ಕ್ಲಬ್ ಕೋಟೆಶ್ವರದ ಸದಸ್ಯರು, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ವಿಜಯ್. ಎಸ್. ಪೂಜಾರಿ, ತಾಲೂಕು ವೈದ್ಯಾಧಿಕಾರಿ ರಾಜೇಶ್ವರಿ, ಪುರಸಭೆ ಸದಸ್ಯರು ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.