logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ಪೊಲೀಸರ ದಾಳಿ: 7ಮಂದಿಯ ಬಂಧನ, 5950 ರೂ. ಹಣ ವಶ

ಟ್ರೆಂಡಿಂಗ್
share whatsappshare facebookshare telegram
7 Aug 2022
post image

ಕುಂದಾಪುರ; ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಕುಂದಾಪುರ ಪೊಲೀಸರು ಏಳು ಮಂದಿಯನ್ನು ಬಂಧಿಸಿ, 5950 ರೂ. ಹಣ ವಶಪಡಿಸಿಕೊಂಡ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಟಿ.ಟಿ ರೋಡ್ ಬಳಿ ಆ.6ರಂದು ಮಧ್ಯಾಹ್ನ ನಡೆದಿದೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ವಿಶ್ವನಾಥ, ಗಣೇಶ ದೇವಾಡಿಗ, ರತ್ನಾಕರ, ಬೀರಪ್ಪ ಗೌಡರ್, ದೇವ, ಮಂಜುನಾಥ ಹಾಗೂ ಶ್ರೀಕಾಂತ ಗೌಡರ್ ಎಂದು ಗುರುತಿಸಲಾಗಿದೆ. ಬಂಧಿತರು ಟಿ.ಟಿ ರೋಡ್ ಬಳಿಯ ಸಾರ್ವಜನಿಕ‌ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಟದಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 5950 ರೂ. ಹಣ ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ‌. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.