



ಕುಂದಾಪುರ: ಹಿರಿಯ ರಾಜಕಾರಣಿ ಬಿಜೆಪಿಯ ಭೀಷ್ಮ ಎಜಿ ಕೊಡ್ಗಿ ( ಅಮವಾಸ್ಯೆಬೈಲು ಗೋಪಾಲಕೃಷ್ಣ ಕೊಡ್ಗಿ) ವಯೊಸಹಜ ಕಾಯಿಲೆ ಯಿಂದ ಜೂ.13 ರಂದು ಮಣಿಪಾಲ ಆಸ್ಪತ್ರೆ ಯಲ್ಲಿ ನಿಧನರಾದರು. ಕುಂದಾಪುರ ತಾಲೂಕು ಅಮಾಸೆಬೈಲು ಕೃಷಿಕ ಕುಟುಂಬದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೃಷ್ಣರಾಯ ಕೊಡ್ಗಿ ಅವರ ಮಗನಾಗಿ 1929 ರ ಅಕ್ಟೋಬರ್ 1 ರಂದು ಜನಿಸಿದರು . ಗೋಪಾಲಕೃಷ್ಣ ಕೊಡ್ಲಿ ಕಾನೂನು ಪದವಿ ಪಡೆದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಿಟ್ಟೂರು ಶ್ರೀನಿವಾಸ ರಾವ್ ಅವರೊಂದಿಗೆ ಸ್ವಲ್ಪ ಸಮಯ ವಕೀಲರಾಗಿ ಕೆಲಸ ನಿರ್ವಹಿಸಿದ್ದರು. ಬಳಿಕ ಕೃಷಿಯಲ್ಲಿಯೇ ತಮ್ಮನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡವರು.
ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಎಂಟು ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ ಆರ್ಥಿಕ ಸಮಿತಿ ಸದಸ್ಯ, 1972-83 ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ ಎಪಿಎಂಪಿ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿಎಂಸಿ ಅಧ್ಯಕ್ಷ ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 1982-1990ರ ತನಕ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಸೇವೆ ನೀಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.