



ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಡಿ.5ರಂದು ನಡೆಯಿತು. ನಿವೃತ್ತ ಪ್ರಾಂಶುಪಾಲರಾದ ಶ್ರೀ. ಎ. ಲಕ್ಷ್ಮೀ ನಾರಾಯಣ ಚಾತ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸ್ಪರ್ಧಾತ್ಮಕ ಹಾಗೂ ವಾರ್ಷಿಕ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮಿಸಬೇಕು. ಅಂತಹ ವಾತಾವರಣ ಶ್ರೀ ವೆಂಕಟರಮಣ ಸಂಸ್ಥೆಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಅದಕ್ಕೆ ಸ್ಪಂದಿಸಬೇಕು ಎಂದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈಯವರು ಕಡಿಮೆ ಶುಲ್ಕದಲ್ಲಿ ಮೌಲ್ಯಯುತ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಧ್ಯೇಯವಾಗಿದ್ದು, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಿರಿ ಎಂದರು.
ವೇದಿಕೆಯಲ್ಲಿ ಸಂಸ್ಥೆಯ ಕೋಶಾಧಿಕಾರಿ ಲಕ್ಷ್ಮೀ ನಾರಾಯಣ ಶೆಣೈ, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಅಡಿಗ , ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಶ್ರೀಮತಿ ರಾಗಿಣಿ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಪ್ರಣೀತಾ ಸ್ವಾಗತಿಸಿದರು. ಸಿಂಚನಾ ವಂದಿಸಿ, ಕ್ಷಮಾ ಅತಿಥಿಯನ್ನು ಪರಿಚಯಿಸಿದರು. ಅದಿತಿ ಕಾರ್ಯಕ್ರಮ ನಿರೂಪಿದರು. ಅಪರಾಹ್ನ 2 ಗಂಟೆ ಯಿಂದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.