logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಕಾರಿಗೆ ಟ್ಯಾಂಕರ್ ಢಿಕ್ಕಿ: ಪ್ರಯಾಣಿಕರು ಅಪಾಯದಿಂದ ಪಾರು

ಟ್ರೆಂಡಿಂಗ್
share whatsappshare facebookshare telegram
18 Nov 2022
post image

ಕುಂದಾಪುರ: ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಕಾರಿಗೆ ಟ್ಯಾಂಕರ್ ವೊಂದು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಚಾಲಕ ಸಹಿತ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರಿಗೆ ಹಿಂಭಾಗದಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಚಾಲಕ ಸಹಿತ ಇಬ್ಬರು ಮಹಿಳಾ ಪ್ರಯಾಣಿಕರಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಟ್ಯಾಂಕರ್ ಹಾಗೂ ಕಾರು ಎರಡೂ ವಾಹನಗಳು ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದು, ಕೊರವಡಿ ಕ್ರಾಸ್ ಬಳಿ ಆಟೋ ರಿಕ್ಷಾವೊಂದು ಎದುರುಗಡೆಯಿಂದ (ಒನ್ ವೇ) ಬಂದಾಗ ಕಾರು ಚಾಲಕ ಬಲಭಾಗಕ್ಕೆ ಕಾರು ಚಲಾಯಿಸಿದ್ದು ಹಿಂಬದಿಯಿದ್ದ ಟ್ಯಾಂಕರ್ ಕಾರಿಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.